ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 05.   ಅಕ್ರಮ ಮರಳುಗಾರಿಕೆ ವಿರುದ್ಧ ಪೊಲೀಸರಿಗೆ ದೂರು ನೀಡಿದ ಕಾರಣಕ್ಕೆ, ಮರಳು ದಂಧೆಯ ಆರೋಪಿ ಸೋಮೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರೊಬ್ಬರಿಗೆ ರಾಡ್‌ ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಸೋಮೇಶ್ವರ ಪುರಸಭೆ ಕಚೇರಿ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.\

ಸೋಮೇಶ್ವರ ಉಚ್ಚಿಲದ,ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಮ್ ಉಚ್ಚಿಲ(53)ಹಲ್ಲೆಗೊಳಗಾದ ವ್ಯಕ್ತಿ. ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸುನಿಲ್ ಪೂಜಾರಿ ಹಲ್ಲೆಗೈದಿರುವುದಾಗಿ ಆರೋಪಿಸಲಾಗಿದೆ. ಉಚ್ಚಿಲ ಬಟ್ಟಂಪಾಡಿ ಪ್ರದೇಶದಲ್ಲಿ ತಿಂಗಳುಗಳ ಹಿಂದಷ್ಟೆ ಸಿಸಿಬಿ ಪೊಲೀಸರು ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮರಳು ವಶಪಡಿಸಿದ್ದರು. ಆ ಪ್ರಕರಣದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಸುನಿಲ್ ಪೂಜಾರಿ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಹಲ್ಲೆಗೊಳಗಾದ ಕಿಶೋರ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಉಳ್ಳಾಲ ಠಾಣೆಯಲ್ಲಿ ಆರೋಪಿ ಸುನಿಲ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

Also Read  ಮೂಡುಬಿದರೆ: ಸಾವಿರಕಂಬದ ಜೈನ ಬಸದಿಗೆ ಮೂರನೇ ಸ್ಥಾನ

 

 

error: Content is protected !!
Scroll to Top