ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ

(ನ್ಯೂಸ್ ಕಡಬ) newskadaba.com . 05 ಬೆಂಗಳೂರು: ರಾಜ್ಯದ ಸಿ.ಎಂ ಸಿದ್ದರಾಮಯ್ಯನವರ ರಾಜೀನಾಮೆ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ. ಆ ಮುಹೂರ್ತ ಯಾವುದೆಂದು ಸಿದ್ದರಾಮಯ್ಯನವರೇ ಬಾಯಿ ಬಿಡಬೇಕಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿಶ್ಚಿತವಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಪೂರ್ಣ ಅವಧಿ ಪೂರೈಸುವುದಿಲ್ಲ; ಅತಿ ಶೀಘ್ರವೇ ರಾಜೀನಾಮೆ ಕೊಡುತ್ತಾರೆ ಎಂದ ಅವರು, 5 ವರ್ಷ ಕಾಲ ಸಿಎಂ ಆಗಿರುವುದಾಗಿ ರಾಜ್ಯದ ಜನರಿಗೆ ಸಿದ್ದರಾಮಯ್ಯನವರು ಹೇಳಲಿ; ನೋಡೋಣ ಎಂದು ಸವಾಲು ಹಾಕಿದರು.

Also Read  ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು..! - ಅರ್ಜಿ ಸಲ್ಲಿಕೆ ಹೇಗೆ…? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿಗಳು ಮತ್ತವರ ಕುಟುಂಬ ಆರೋಪಿ ಸ್ಥಾನದಲ್ಲಿ ನಿಂತಿದೆ. ಭ್ರಷ್ಟಾಚಾರದ ಸಂಬಂಧ ರಾಜ್ಯದ ಜನತೆಗೆ ಅವರು ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ನೋಟಿಸ್ ಕೊಟ್ಟು ತನಿಖೆಗೆ ಬರಲು ತಿಳಿಸಿದ್ದಾರೆ.

error: Content is protected !!
Scroll to Top