ಪದ್ಮಭೂಷಣ ಪುರಸ್ಕೃತೆ ಖ್ಯಾತ ಗಾಯಕಿ ಶಾರದಾ ಸಿನ್ಹಾ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ, . 06. ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ(72) ಅವರು ಕ್ಯಾನ್ಸರ್ ನಿಂದ ಮಂಗಳವಾರ ರಾತ್ರಿ ನಿಧನರಾದರು.

ಖ್ಯಾತ ಗಾಯಕಿಯನ್ನು ದೆಹಲಿಯ ಏಮ್ಸ್‌ ಗೆ ದಾಖಲಿಸಲಾಗಿತ್ತು ಮತ್ತು ಅಕ್ಟೋಬರ್ 25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ, ಅವರಿಗೆ ಮಲ್ಟಿಪಲ್ ಮೈಲೋಮಾ ರೋಗ ಖಾತರಿಯಾಗಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಚಿಕಿತ್ಸೆಗಾಗಿ ಶ್ರೀಮತಿ ಸಿನ್ಹಾ ಅವರು ವೆಂಟಿಲೇಟರ್‌ನಲ್ಲಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಮತಿ ಸಿನ್ಹಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Also Read  ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ

 

error: Content is protected !!
Scroll to Top