ಪೋಷಣಾ ಅಭಿಯಾನ- ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 06. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧೀನ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ ಇಲ್ಲಿಗೆ ಪೋಷಣಾ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು graduate Digree / social sciences/Nutrition ವಿದ್ಯಾರ್ಹತೆಯನ್ನು ಹೊಂದಿರಬೇಕು. ಸರಕಾರಿ ಅಥವಾ ಸ್ವಯಂಸೇವಾ ಸಂಸ್ಥೆಗಳಲ್ಲಿ ಕನಿಷ್ಠ ಎರಡು ವರ್ಷ ಅನುಭವ ಹೊಂದಿರಬೇಕು. ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಮಾಸಿಕ 20,000 ರೂ.ಗಳ ಗೌರವ ಧನ ನೀಡಲಾಗುತ್ತದೆ.

Also Read  ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ

ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ದಾಖಲೆಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಉರ್ವ ಮಾರ್ಕೆಟ್, ಮೂರನೇ ಮಹಡಿ, ಅಶೋಕನಗರ ಮಂಗಳೂರು ಇಲ್ಲಿಗೆ ಅರ್ಜಿ ಸಲ್ಲಿಸಬೇಕು ಎಂದು ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top