(ನ್ಯೂಸ್ ಕಡಬ) newskadaba.com ನ. 06 ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ “ರಾಜ್ಯದಲ್ಲಿ ಈಗ ಪೇ ಡಬಲ್ ಸಿಎಂ ಆಗಿದೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರವೇ ಮುಳುಗಿ ಹೋಗಿದ್ದು, ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ” ಎಂದು ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಅಬಕಾರಿ ಇಲಾಖೆಯಲ್ಲಿ ಕಮಿಷನ್ ಆರೋಪ ಕೇಳಿ ಬಂದಿದೆ. ಹಣಕಾಸು ಇಲಾಖೆ ನೇರವಾಗಿ ಮುಖ್ಯಮಂತ್ರಿಗಳ ಕೈಯಲ್ಲಿಯೇ ಇದೆ. ಒಂದೊಂದು ಲೈಸೆನ್ಸ್ ನೀಡಲು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎನ್ನುವುದನ್ನು ಅವರೇ ತನಿಖೆ ನಡೆಸಲಿ ಎಂದು ಆಗ್ರಹಿಸಿದರು. ಇಡೀ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಂದಲೂ ತಿಂಗಳಿಗೆ ಕಮಿಷನ್ ವಸೂಲಿಗೆ ಫಿಕ್ಸ್ ಮಾಡುವ ಹಂತಕ್ಕೆ ಹೋಗಿದ್ದಾರೆ ಎಂದರೆ, ಭ್ರಷ್ಟಾಚಾರ ಯಾವ ಹಂತಕ್ಕೆ ತಲುಪಿದೆ ರಲ್ಲಿ ಎಂದು ಊಹಿಸಿ ಎಂದರು.