ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ ರಾಘವೇಂದ್ರ ಮಠಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, . 06.  ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ಅವರು ಇತ್ತೀಚೆಗೆ ತಮ್ಮ ಪತ್ನಿ ಅಕ್ಷತಾ ಮೂರ್ತಿ ಮತ್ತು ಅವರ ಪೋಷಕರು, ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಲೋಕೋಪಕಾರಿ ಸುಧಾ ಮೂರ್ತಿ ಅವರೊಂದಿಗೆ ಕರ್ನಾಟಕದ ಬೆಂಗಳೂರಿನಲ್ಲಿರುವ ಪೂಜ್ಯ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದರು.

ಮಂಗಳವಾರ ಬೆಂಗಳೂರಿಗೆ ಪತ್ನಿ ಜೊತೆ ಆಗಮಿಸಿದ್ದ ಸುನಾಕ್ ಅವರು ಬಳಿಕ ರಾಘವೇಂದ್ರ ಮಠಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದಿದ್ದಾರೆ. ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ಹುಟ್ಟಿ ಬೆಳೆದ ಸುನಕ್, ಭಾರತದೊಂದಿಗೆ ಪೂರ್ವಜರ ಸಂಬಂಧವನ್ನು ಹೊಂದಿದ್ದಾರೆ.

Also Read  ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ಮೇ.10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ..!

 

error: Content is protected !!
Scroll to Top