ಸಾಣೂರು ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ

(ನ್ಯೂಸ್ ಕಡಬ) newskadaba.com ಕಾರ್ಕಳ, . 06.  ಗ್ರಾಮ ಪಂಚಾಯತ್ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯ ವತಿಯಿಂದ 2023-24 ನೇ ಸಾಲಿನ ಪಂಚಾಯತ್ ರಾಜ್ ಪ್ರಶಸ್ತಿಗೆ ಸ್ಪರ್ಧಿಸಲು ಕರ್ನಾಟಕ ರಾಜ್ಯದಿಂದ ನಾಮ ನಿರ್ದೇಶನ ಗೊಂಡಿದ್ದು ಅತ್ಯಂತ ಸಂತಸ ತಂದಿದೆ ಎಂದು ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ನಾಮನಿರ್ದೇಶನಕ್ಕೆ ಸಹಕರಿಸಿದ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ರವರಿಗೆ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ, ಗ್ರಾ.ಪಂ. ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರಿಗೆ, ವಿಶೇಷವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿರವರು, ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿಯವರು, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಮತ್ತು ಎಲ್ಲಾ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿ ಮತ್ತು ಸಿಬ್ಬಂದಿಗಳು, ಅಂಗನವಾಡಿಯ ಎಲ್ಲಾ ಕಾರ್ಯಕರ್ತೆಯರು ಮತ್ತು ಸಿಬ್ಬಂದಿಗಳು, ಎಲ್ಲ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಎಲ್ಲ ಪದಾಧಿಕಾರಿಗಳು, ಸ್ವ ಸಹಾಯ ಸಂಘದವರು, ಧರ್ಮಸ್ಥಳ ಯೋಜನೆಯ ಶೌರ್ಯ ವಿಪತ್ತು ಘಟಕ, ಯುವಕ ಮಂಡಲ (ರಿ) ಸಾಣೂರು, ಬಾಲಾಂಜನೇಯ ಯುವಕ ಸಂಘ, ಸಾಣೂರು ಗ್ರಾಮದ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರ ಸಹಕಾರ ನಿರಂತರವಾಗಿ ಸಿಕ್ಕಿದ್ದು ಎಲ್ಲರಿಗೂ ಗ್ರಾಮ ಪಂಚಾಯತ್ ವತಿಯಿಂದ ಧನ್ಯವಾದ ಸಲ್ಲಿಸಿದ್ದಾರೆ.

Also Read  ಸೆ.12ರಂದು ಕಡಬದಲ್ಲಿ ಡಿ.ಕೆ.ಶಿ ಬಂಧನದ ವಿರುದ್ಧ ಬೃಹತ್ ಪ್ರತಿಭಟನೆ ➤ತಹಸೀಲ್ದಾರ ಮುಖಾಂತರ ರಾಜ್ಯಪಾಲರಿಗೆ, ರಾಷ್ಟ್ರಪತಿಗಳಿಗೆ ಮನವಿ.

 

error: Content is protected !!
Scroll to Top