ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com . 06ನವದೆಹಲಿ: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ. ‘ನಿಮ್ಮ ಹಿಂದಿನ ಅವಧಿಯ ಯಶಸ್ಸಿನಂತೆಯೇ ಭಾರತ-ಅಮೆರಿಕ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಿಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

Also Read  ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಲೇಬೇಕು-ಹೈ ಕೋರ್ಟ್

error: Content is protected !!
Scroll to Top