ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’

(ನ್ಯೂಸ್ ಕಡಬ) newskadaba.com ಉಡುಪಿ, . 07. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಲಯನ್ಸ್ ಜಿಲ್ಲೆ 317Cಯ ಲಯನ್ ದಂಪತಿಗಳಿಗೆ ವಿನೂತನ ರೀತಿಯ ಆದರ್ಶ ದಂಪತಿ ಸ್ಪರ್ಧೆ ಉದ್ಯಾವರ ಚರ್ಚ್ ವಠಾರದಲ್ಲಿ ನವಂಬರ್ 24 ಆದಿತ್ಯವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯ ಪೋಸ್ಟರ್ ಅನ್ನು ಎಚ್’ಪಿಆರ್ ಫಿಲಂಸ್ ಮುಖ್ಯಸ್ಥ ಮತ್ತು ಎಲ್’ಸಿಯಫ್ ಕೋಆರ್ಡಿನೇಟರ್ ಲಯನ್ ಹರಿಪ್ರಸಾದ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ ಡಾ. ಶೇಕ್ ವಹಿದ್ ಉಡುಪಿ, ಕಾಪು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಮತ್ತು ಪತ್ರಕರ್ತ ರಾಕೇಶ್ ಕುಂಜೂರು, ಪ್ರಾಂತೀಯ ಅಧ್ಯಕ್ಷ ಲಯನ್ ಮೆಲ್ವಿನ್ ಆರನ್ನ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Also Read  ಕಡಬ: ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಆನೆ ಶಿಬಿರದಲ್ಲಿ ಸಾವು

ಒಂದು ಕ್ಲಬ್ ನಿಂದ ಒಂದು ದಂಪತಿಗೆ ಮಾತ್ರ ಅವಕಾಶವಿದ್ದು, ನವೆಂಬರ್ 10 ಹೆಸರು ನೋಂದಾಯಿಸಲು ಕೊನೆಯ ದಿನಾಂಕ. ಕಾರ್ಯಕ್ರಮದ ಸಂಚಾಲಕ ಲಯನ್ ಸ್ಟೀವನ್ ಕುಲಾಸೊ ಇವರ ಮೊಬೈಲ್ ಸಂಖ್ಯೆ 9901701381 ಗೆ ಹೆಚ್ಚಿನ ಮಾಹಿತಿ ಮತ್ತು ಹೆಸರು ನೋಂದಾಯಿಸಲು ಸಂಪರ್ಕಿಸಬಹುದಾಗಿದೆ.

 

 

error: Content is protected !!
Scroll to Top