ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 07. 2024-25ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಈ ಕೆಳಕಂಡ ಕಲ್ಯಾಣ ಯೋಜನೆಗಳಿಗೆ ಕರ್ನಾಟಕ  ಮಹರ್ಷಿ ವಾಲ್ಮೀಕಿ  ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಅರ್ಜಿ ಆಹ್ವಾನಿಸಲಾಗಿದೆ.

1.ಸ್ವಯಂ ಉದ್ಯೋಗ ನೇರಸಾಲ ಯೋಜನೆ:
ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ ರೂ.1.00 ಲಕ್ಷ. ಇದರಲ್ಲಿ ಸಹಾಯಧನ ರೂ.50,000/- ಹಾಗೂ ಸಾಲ ರೂ. 80,000/- (ಶೇಕಡ 4 ರಷ್ಟು ಬಡ್ಡಿದರ)

2. ಉದ್ಯಮಶೀಲತಾ ಅಭಿವೃದ್ಧಿ ಯೋಜನೆ :
ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಗರಿಷ್ಟ ರೂ.2ಲಕ್ಷ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

3.ಸ್ವಾವಲಂಬಿ ಸಾರಥಿ:
ಸರಕು ವಾಹನ ಟ್ಯಾಕ್ಸಿ (ಹಳದಿ ಬೋರ್ಡ್ ಖರೀದಿಸುವ ಉದ್ದೇಶಕ್ಕೆ ಸಾಲದ ಮೊತ್ತ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ. 4.00 ಲಕ್ಷ ನೀಡಲಾಗುವುದು.

Also Read  ಬೆಳ್ತಂಗಡಿ: 'ತಾಂಟ್ ರೆ ಬಾ ತಾಂಟ್' ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ

4.ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ:
ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಠ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ, ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ ರೂ.2.50 ಲಕ್ಷ ಇದರಲ್ಲಿ ಸಹಾಯಧನ ರೂ.1.50 ಲಕ್ಷ ಹಾಗೂ ಸಾಲ ರೂ.1.00 ಲಕ್ಷ (ಶೇಕಡ 4ರಷ್ಟು ಬಡ್ಡಿದರ)

5.ಗಂಗಾ ಕಲ್ಯಾಣ ಯೋಜನೆ :
1.20 ಎಕರೆಯಿಂದ 5 ಎಕರೆಯವರೆಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು. ಘಟಕ ವೆಚ್ಚ ರೂ.4.75 ಲಕ್ಷ/ ರೂ.3.75 ಲಕ್ಷ ಇದರಲ್ಲಿ ರೂ.50,000/- ಸಾಲವೂ ಸೇರಿರುತ್ತದೆ. ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ವೆಬ್‍ಸೈಟ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ.

Also Read  100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ...!

ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮಗಳ ವೆಬ್‍ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ. ಸಹಾಯವಾಣಿ 948230040O ಸಂಪರ್ಕಿಸುವಂತೆ ಕರ್ನಾಟಕ  ಮಹರ್ಷಿ ವಾಲ್ಮೀಕಿ  ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top