(ನ್ಯೂಸ್ ಕಡಬ) newskadaba.com ನ. 07. ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಮೇ 19 ರಂದು ಹೊರಡಿಸಿರುವಂತೆ, ರಾಜ್ಯದ ಮಹಾನಗರ ಪಾಲಿಕೆಗಳು, ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾಗಿ ಪರವಾನಿಗೆ ಪಡೆಯಲು ಪಾಲಿಕೆಯಿಂದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ಮಾಹಿತಿಗಳೊಂದಿಗೆ ನವೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಶುಲ್ಕ ರೂ.500 ಆಗಿದ್ದು, ಒಂದು ವರ್ಷ ಚಾಲ್ತಿಯಲ್ಲಿರುತ್ತದೆ. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಆಧಾರ್ ಕಾರ್ಡ್, ಬಾಡಿಗೆ ಕರಾರು ಪತ್ರ, ಉದ್ಯಮ ಪರವಾನಿಗೆ, ಫೋಟೋ. ಡಿಸೆಂಬರ್ 1ರ ನಂತರ ಪ್ರತ್ಯೇಕ ಪರವಾನಿಗೆ ಪಡೆಯದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ತಂಬಾಕು ವ್ಯಾಪಾರಸ್ಥರ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.