ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ

Crime

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ. 07. ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಕೇರಳದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಹೆಜಮಾಡಿ ಟೋಲ್ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ಪೊಲೀಸರು ಕಾರು ಸಹಿತ ಅದರ ಚಾಲಕ ಸಹಿತ ಇನ್ನೋರ್ವನನ್ನು ವಶಕ್ಕೆ ಪಡೆದಿದ್ದು, ಕುಡಿತ ಮತ್ತಿನಲ್ಲಿದ್ದ ಅವರ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  Find out how to Activate Windows Q0 Utilizing KMSPico: A Step-by-Step Guide

 

 

error: Content is protected !!
Scroll to Top