ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಸುಳ್ಯ, ನ. 07. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.

 

ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ ಪೂಜಾ ಪರಿಕರಗಳು ಹಾಗೂ ಸಿಸಿಟಿವಿ ಕ್ಯಾಮರಾ ಕದ್ದೊಯ್ದಿದ್ದಾರೆ. ಕುಕ್ಕೆ ದೇವಸ್ಥಾನದ ಸಿಇಒ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಗೋಣಿ ಚೀಲದಲ್ಲಿ ಕದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Also Read  ಕಂಬಳ ಪ್ರೇಮಿ, ಕಡಬದ ಎಸ್ಇಎಸ್ ಚಿಕನ್ ಸೆಂಟರ್ ಮಾಲಕ ಅಬ್ದುಲ್ ಖಾದರ್ ನಿಧನ

 

error: Content is protected !!
Scroll to Top