ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್​​ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ.


ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್​​ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್​ಗೆ ಹೋಗಿದ್ದರು.

Also Read  ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು - ಆರೋಪಿಗಳಿಬ್ಬರ ಬಂಧನ

ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ಗೆ ಈಗಾಗಲೇ ಜಾಮೀನು ದೊರೆತಿದ್ದು, ಬೆನ್ನು ನೋವಿಗೆ ಸರ್ಜಿಕಲ್‌ ಚಿಕಿತ್ಸೆ ಅಗತ್ಯವಿರುವುದರಿಂದ ಜಾಮೀನು ನೀಡಬೇಕು ಎಂದು ದರ್ಶನ್‌ ವಕೀಲರು ವಾದಿಸಿದ್ದರು. ಹೀಗಾಗಿ, ಚಿಕಿತ್ಸೆಗಾಗಿ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು.

error: Content is protected !!
Scroll to Top