MBBS ಓದುವ ಎಸ್.ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹಧನ

(ನ್ಯೂಸ್ ಕಡಬ) newskadaba.com ನ. 07. ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ಗಳವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.


ಪಿಯುಸಿಯಲ್ಲಿ ಶೇಕಡಾ 95 ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್‌ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ 25 ಲಕ್ಷ ರೂಪಾಯಿ ಪಾವತಿಸಲು ಪ್ರೋತ್ಸಾಹ ಧನ ಮಂಜೂರು ಮಾಡಲಾಗುವುದು.

Also Read  ಚೆಕ್ ಬೌನ್ಸ್: ನಟಿ ಪದ್ಮಜಾ ರಾವ್'ಗೆ 3 ತಿಂಗಳ ಜೈಲು ಶಿಕ್ಷೆ ಪ್ರಕಟ

ಅದೇ ವಿದ್ಯಾರ್ಥಿಯು ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 60ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಪುನಃ 25 ಲಕ್ಷ ಪ್ರೋತ್ಸಾಹಧನ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

error: Content is protected !!
Scroll to Top