ನೆಕ್ಕಿಲಾಡಿ: ಅತ್ಯಾಚಾರ ಪ್ರಕರಣದ ಆರೋಪಿ ಬಂಧನ ► ಸುಮಾರು ಹದಿನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.22. ಸುಮಾರು 14 ವರ್ಷಗಳ ಹಿಂದೆ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ.

ಬಂಧಿತ ಆರೋಪಿಯನ್ನು 34ನೇ ನೆಕ್ಕಿಲಾಡಿ ಗ್ರಾಮದ ಬೀತಲಪ್ಪು ನಿವಾಸಿ ಹಿತೇಶ್ ಎಂದು ಗುರುತಿಸಲಾಗಿದೆ. 2004 ರಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಎಂಬಲ್ಲಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದನೆನ್ನಲಾಗಿದೆ. ಆ ಬಳಿಕ ಆರೋಪಿಯು ಹೆಸರು ಬದಲಾಯಿಸಿ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ನೆನ್ನಲಾಗಿದ್ದು, ಗುರುವಾರದಂದು ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

Also Read  ಮಂಗಳೂರು: ಆರೋಪಿಯೊಂದಿಗೆ ಸೇರಿ 8 ಸಿಸಿಬಿ ತಂಡದಿಂದ ಬಾರ್ ಪಾರ್ಟಿ- ವಿಡಿಯೋ ವೈರಲ್ ➤ ಸೂಕ್ತ ತನಿಖೆಗೆ ಕಮಿಷನರ್ ಆದೇಶ

error: Content is protected !!
Scroll to Top