ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕುಡಿದ ಮತ್ತಲ್ಲಿ ವೈದ್ಯ ಹಾಗೂ ನರ್ಸ್ ಸೇರಿ ಆಸ್ಪತ್ರೆಗೆ ಬಂದಿದ್ದ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ನ.3ರಂದು ಯುವತಿಯೊಬ್ಬಳು ತೀವ್ರ ಜ್ವರದಿಂದ ಆಸ್ಪತ್ರೆಗೆ ಹೋಗಿದ್ದಳು. ಈ ವೇಳೆ ಡಾ.ಪ್ರದೀಪ್ ಹಾಗೂ ನರ್ಸ್ ಮಹೇಂದ್ರ ಕುಡಿದ ಮತ್ತಿನಲ್ಲಿದ್ದರು. ಈ ವೇಳೆ ಯುವತಿಗೆ ಮಹೇಂದ್ರ ಇಂಜೆಕ್ಷನ್‌ ನೀಡಿದ್ದಾನೆ. ಬಳಿಕ ಡಾ.ಪ್ರದೀಪ್‌ನನ್ನು ಕರೆದು ಚಿಕಿತ್ಸೆ ಕೊಡುವಂತೆ ಹೇಳಿದ್ದಾನೆ. ಡಾ.ಪ್ರದೀಪ್ ಇಂಜೆಕ್ಷನ್ ಹಿಡಿದು ಯುವತಿಯ ಮೈಕೈಗೆ 4-5 ಬಾರಿ ಇಂಜೆಕ್ಷನ್ ಚುಚ್ಚಿದ್ದಾನೆ. ಅಲ್ಲದೇ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

Also Read  ಪ್ರಜ್ವಲ್ ರೇವಣ್ಣ 'ಸಾಮೂಹಿಕ ಅತ್ಯಾಚಾರಿ' ಎಂದ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕನ ವಿರುದ್ಧ PIL ದಾಖಲು

 

error: Content is protected !!
Scroll to Top