ಬೆಂಕಿ ಅವಘಡ: 16 ಕಾರ್ಮಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ನ. 07. ಸ್ಟೀಲ್ ಕಂಪನಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 16 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆಯ ಮಾಹಿತಿ ಪಡೆದ ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವಾರ್ಧಾ ಜಿಲ್ಲಾಧಿಕಾರಿ ರಾಹುಲ್ ಕಾರ್ಡಿಲೆ ತಿಳಿಸಿದ್ದಾರೆ.

Also Read  ➤ ಪ್ರೇಯಸಿಗಾಗಿ ತನ್ನ ಗೆಳೆಯನನ್ನೆ ಕ್ರೂರವಾಗಿ ಕೊಂದ ಆಸಾಮಿ

 

 

error: Content is protected !!
Scroll to Top