ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್

(ನ್ಯೂಸ್ ಕಡಬ) newskadaba.com ಹಾವೇರಿ, ನ. 08. ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಮೃತ ರೈತ ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ರವರಿಗೆ ಸಲ್ಲಿಸಿರುತ್ತಾರೆ. ಮೃತನ ಕುಟುಂಬಕ್ಕೆ ಸರ್ಕಾರದಿಂದ 05 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ ಎಂಬುವುದಾಗಿ ಹಾವೇರಿ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ರೈತನ ಆತ್ಮಹತ್ಯೆಗೆ ಕಾರಣ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ದ ಎಫ್‌ಐಆರ್‍ ದಾಖಲಿಸಲಾಗಿದೆ.

Also Read  'ರೆಪೊ ದರ'ದಲ್ಲಿ ಬದಲಾವಣೆ ಇಲ್ಲ RBI ಗವರ್ನರ್

 

error: Content is protected !!
Scroll to Top