ಭಾರತ & ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಸಂಭಾವ್ಯ ತಂಡ ರಚನೆ

(ನ್ಯೂಸ್ ಕಡಬ) newskadaba.com ಡರ್ಬನ್ ನ. 07: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ಭಾರತೀಯ ಕಾಲಮಾನ 8.30ರಿಂದ ಆರಂಭವಾಗಲಿದೆ. 2024ರ ಐಸಿಸಿ ಟಿ20  ವಿಶ್ವಕಪ್ ಫೈನಲ್‌ ಬಳಿಕ ಎರಡು ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಇಲ್ಲಿನ ಡರ್ಬನ್ ಮೈದಾನ ಆತಿಥ್ಯ ವಹಿಸಿದೆ. ಭಾರತ ಕ್ರಿಕೆಟ್‌ ತಂಡವು 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಬಲಾಢ್ಯ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಇದಾದ ಬಳಿಕ ಈ ಐತಿಹಾಸಿಕ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಲು ಕಣಕ್ಕಿಳಿಯುತ್ತಿದೆ.

Also Read  ಭಾರತ ಮೂಲದ ಅಜಯ್ ಬಂಗಾ ಅವರಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷ ಪಟ್ಟ

error: Content is protected !!
Scroll to Top