(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ರಾಜ್ಯದ ಪ್ರತಿ ದೇವಸ್ಥಾನದ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ ರೂಪಿಸಿದೆ. ಈಗಾಗಲೇ ಆನ್‍ಲೈನ್ ಸೇವೆ, ಬುಕ್ಕಿಂಗ್ ಸೇವೆ ಜಾರಿಯಾಗಿದೆ.
ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದ್ದು, ಪ್ರಸಾದದ ದರ ಹಾಗೂ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರ ಫಿಕ್ಸ್ ಮಾಡಲು ಇಲಾಖೆ ಮುಂದಾಗಿದೆ. ಅಧಿಕಾರಿಗಳು ಸಚಿವರ ಜೊತೆ ಚರ್ಚೆ ಮಾಡಿ ಶೀಘ್ರದಲ್ಲೇ ಜಾರಿ ಮಾಡಲಿದ್ದಾರೆ.