ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ನ. 08. ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 80 ಮತ್ತು 81 ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಎಚ್ಚರಿಕೆ ನೀಡಿದೆ.

ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಮಕ್ಕಳ ರಕ್ಷಣಾ ಘಟಕ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನವೆಂಬರ್ ತಿಂಗಳಲ್ಲಿ ಕಾನೂನು ಬದ್ಧ ದತ್ತುವನ್ನು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಲ್ಲಿ ದತ್ತು ಮಾಸಾಚರಣೆ ಆಚರಿಸಲಾಗುತ್ತಿದೆ.

Also Read  ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 13 ಮಂದಿ ಮೃತ್ಯು

ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಮಕ್ಕಳ ರಕ್ಷಣಾ ಘಟಕ ಕಛೇರಿಯ ದೂರವಾಣಿ ಸಂಖ್ಯೆ:0824-2440004 ಅಥವಾ ಮಕ್ಕಳ ಸಹಾಯವಾಣಿ 1098 ಅಥವಾ 112 ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top