ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

(ನ್ಯೂಸ್ ಕಡಬ) newskadaba.com ನ. 08. ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.

ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೇ ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.

Also Read  ಬೇಕಾಬಿಟ್ಟಿ ಬೈಕ್ ಚಲಾವಣೆ ➤ ವ್ಯಕ್ತಿಯ ವಿರುದ್ಧ ಸೊಮೊಟೋ ಪ್ರಕರಣ ದಾಖಲು

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

error: Content is protected !!
Scroll to Top