ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ನ. 08. 2024-25ನೇ ಸಾಲಿನಲ್ಲಿ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸೇನಾ ಆಯ್ಕೆಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು:
ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ-(ಪ್ರವರ್ಗ-1)ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ಲಕ್ಷಗಳು.

ಅಭ್ಯರ್ಥಿ 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತೀ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45ರಷ್ಟು ಅಂಕಗಳನ್ನು ಪಡೆದಿರಬೇಕು. (ಬಾಲಕರಿಗೆ ಮಾತ್ರ). ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

Also Read  ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಅರ್ಹರಿಂದ ಅರ್ಜಿ ಆಹ್ವಾನ

ಅಭ್ಯರ್ಥಿಯು 22 ನವೆಂಬರ್ 2004 ರಿಂದ 22 ನವೆಂಬರ್ 2007 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ತರಬೇತಿಯನ್ನು ಜಿಲ್ಲೆಯಲ್ಲಿಯೇ ನೀಡಲಾಗುತ್ತದೆ. ತರಬೇತಿಯಲ್ಲಿ ಉಚಿತ ಊಟ ಮತ್ತು ವಸತಿಯೊಂದಿಗೆ ನೀಡಲಾಗುವುದು.

ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ-575004- ಇಲ್ಲಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 22 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್‍ಸೈಟ್ https://bcwd.Karnataka.gov.in ಅಥವಾ ಜಿಲ್ಲಾ ಕಚೇರಿಯಿಂದ ಖುದ್ದಾಗಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ದೂರವಾಣಿ ಸಂಖ್ಯೆ-0824-2225078 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ತಿರುಪತಿ ತಿಮ್ಮಪ್ಪನ ಕ್ಷೇತ್ರದಲ್ಲಿ ಮತ್ತೊಂದು ಅವಘಡ: ಲಡ್ಡು ಕೌಂಟರ್‌ಗಳಲ್ಲಿ ಬೆಂಕಿ

error: Content is protected !!