ಅರೆಕಾಲಿಕ ಶಿಕ್ಷಕರ ನೇಮಕಾತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 09. ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ, ಇಲ್ಲಿಗೆ ಅರೆಕಾಲಿಕ ನೆಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನವೆಂಬರ್ 21ರ ಒಳಗಾಗಿ ಖುದ್ದಾಗಿ ಸರ್ಕಾರಿ ಬಾಲಕರ ಬಾಲಮಂದಿರ, ಬೊಂದೇಲ್, ಮಂಗಳೂರು ಇಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2485401 ಸಂಪರ್ಕಿಸುವಂತೆ ಸರಕಾರಿ ಬಾಲಕರ ಬಾಲಮಂದಿರ, ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top