ನವೆಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ನ. 09. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ನವೆಂಬರ್ 11ರಂದು ಬೆಳಿಗ್ಗೆ 10.30 ಗಂಟೆಗೆ ಕುದ್ರೋಳಿಯಲ್ಲಿರುವ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆಯಲಿದೆ.

ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರ ಉಪಸ್ಥಿತಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯ ರಾಮ ಕೃಷ್ಣಭಟ್ ಚೊಕ್ಕಾಡಿ ವೀರರಾಣಿ ಒನಕೆ ಓಬವ್ವ ಜಯಂತಿ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top