ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ನ. 09. ವೆನ್‍ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ.ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ.ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ.ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪುಗಟ್ಟಿದ ರೋಗಿಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಿದರು. ಡಾ ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.

Also Read  ಮಂಗಳೂರು : ಬಾಂಬರ್ ಆದಿತ್ಯರಾವ್ ನ ಮಂಪರು ಪರೀಕ್ಷೆ ಮುಕ್ತಾಯ

ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನರ್ಸಿಂಗ್ ಅಧಿಕಾರಿಗಳಾದ ಶೈಲಾ, ಜೆಸಿಂತಾ, ಅಶ್ವಿನಿ, ರೇಷ್ಮ ಅಲ್ವನ ಮೆನೇಜ್ಸ್ ಇದ್ದರು. ಓಟಿ ಟೆಕ್ನಿಷಿಯನ್‍ ಗಳಾದ ಧನುಷ್, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು. ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದ. ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top