ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ- ಸಿಜೆಐ ಚಂದ್ರಚೂಡ್

(ನ್ಯೂಸ್ ಕಡಬ) newskadaba.com ನ. 09. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತರಾದ ಸಿಜೆಐ ಚಂದ್ರಚೂಡ್ ಅವರು, ‘ನನ್ನಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಇರಲಿ’ ಎಂದು ಕೇಳಿಕೊಂಡಿದ್ದಾರೆ.

ಈ ಕುರಿತು ಶುಕ್ರವಾರದಂದು ಕೋರ್ಟ್ ಹಾಲ್‌ ನಲ್ಲಿ ಮಾತನಾಡಿದ ಅವರು, ನ್ಯಾಯಾಲಯವೇ ನನ್ನನ್ನು ಮುಂದುವರೆಸುತ್ತದೆ. ನಮ್ಮ ಅರಿವಿಗೆ ಬಾರದಂತೆ ಎಷ್ಟೋ ಜನರನ್ನು ಭೇಟಿಯಾಗಿರುತ್ತೇವೆ. ನಾನು ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನಿಂದ ತಪ್ಪಾಗಿದ್ದರೆ ಅಥವಾ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ ಎಂದು ತಿಳಿಸಿದ್ದಾರೆ.

Scroll to Top