ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ – News Kadaba

ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ನ. 09. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರೆ ಮೃತಪಟ್ಟು, ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ.

ಮೃತಪಟ್ಟ ಸವಾರೆಯನ್ನು ಪುತ್ತೂರು ಖಾಸಗಿ ಕಾಲೇಜೊಂದರ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಅವರ ಪುತ್ರಿ ರಚನಾ (20) ಎಂದು ಗುರುತಿಸಲಾಗಿದೆ. ಅವರ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯಾ ಗಂಭೀರ ಗಾಯಗೊಂಡಿದ್ದಾರೆ.

ರಚನಾ ಅವರು ತಮ್ಮ ಸ್ಕೂಟಿಯಲ್ಲಿ ಸಹೋದರಿ ಅನನ್ಯಾ ಅವರನ್ನು ಕುಳ್ಳಿರಿಸಿಕೊಂಡು ಸುಳ್ಯದಿಂದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಸೂಂತೋಡು ಎಂಬಲ್ಲಿ ಸ್ಕೂಟಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಚನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರ ಸಹೋದರಿ ಅನನ್ಯಾ ಕಾಲಿಗೆ ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top