ಚಾರ್ಮಾಡಿ ಘಾಟ್ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ- ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ನ. 09. ಚಾರ್ಮಾಡಿ ಘಾಟ್‌ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಈ ಯೋಜನೆಯ ಮೂಲಕ ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಈ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.

Also Read  ಸುಳ್ಯದ ನ್ಯಾಯವಾದಿ ಬಿ.ಎಸ್.ಶರೀಫ್ ಆತ್ಮಹತ್ಯೆಗೆ ಶರಣು

ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್ ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜೊತೆಗೆ ಸುಗಮ ಸರಕು ಸಾಗಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡಾ ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ ಎಂದರು.

error: Content is protected !!
Scroll to Top