ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಗ್ಯಾರಂಟಿ ಬಂದ್: ಹೆಚ್ .ಡಿ. ದೇವೆಗೌಡ

(ನ್ಯೂಸ್ ಕಡಬ) newskadaba.com ನ. 11.ಚನ್ನಪಟ್ಟಣ: ರಾಜ್ಯದ ಕಾಂಗ್ರೆಸ್ ಸರ್ಕಾರವು ಸರ್ಕಾರದ  ಖಜಾನೆಯನ್ನು ದಿವಾಳಿ ಮಾಡುತ್ತಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ, ಆದರೆ ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಈ ಸರ್ಕಾರ ದಿವಾಳಿಯಾಗಿದ್ದು, ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also Read  ಸುಳ್ಯ: ಕಾಂಗ್ರೆಸ್ ಮುಖಂಡ ಹಾಜಿ ಬೀರಾ ಮೊಯ್ದಿನ್ ನಿಧನ

error: Content is protected !!
Scroll to Top