ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 09.ಬಂಟ್ವಾಳ: ನವದೆಹಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ವಜಾಗೊಳಿಸಿತು. ಹೀಗಾಗಿ ಅವರಿಗೆ ಜೈಲೇ ಗತಿಯಾಗಿದೆ.

Also Read  ಕೊಡಗು: ಕಾರ್ಮಿಕರ ಕೊರತೆ ➤ ಭತ್ತ ಕೊಯ್ಲು ಯಂತ್ರಗಳನ್ನು ಬಾಡಿಗೆಗೆ ಪಡೆಯುತ್ತಿರುವ ರೈತರು

error: Content is protected !!
Scroll to Top