ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾನಂತಿ ಸಾವು

(ನ್ಯೂಸ್ ಕಡಬ) newskadaba.com ನ. 09.ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ಇಂದು (ಸೋಮವಾರ) ಬೆಳಗ್ಗೆ ಸಂಭವಿಸಿದೆ.

ಕಾರ್ಕಳದ ರಂಜಿತಾ ಎಂಬಾಕೆ ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಆರೋಗ್ಯ ಸಮಸ್ಯೆಯಿಂದ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು. ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಚಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ.

ಕೂಡಲೇ ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಕೆ ಮೃತಪಟ್ಡಿದ್ದಾರೆಂದು ಆಸ್ಪತ್ರೆಯ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.

Scroll to Top