(ನ್ಯೂಸ್ ಕಡಬ) newskadaba.com ನ. 09.ಕಲಬುರ್ಗಿ: ಪ್ರಚೋದನಕಾರಿ ಹೇಳಿಕೆ ನೀಡಿದ ಮೇರೆಗೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ಖಂಡಿಸಿ ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ನಡೆದಿದ್ದ ವಕ್ಫ್ ಹಠಾವೋ, ದೇಶ ಬಚಾವೋ ಪ್ರತಿಭಟನೆಯ ವೇಳೆ ಮರುಳಾರಾಧ್ಯ ಸ್ವಾಮೀಜಿ ಅವರು, ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ, ವಕ್ಫ್ ತೆಗೆಯದಿದ್ದರೆ ಜೀವ ತೆಗೆಯೋಕೆ ನಾವು ರೆಡಿ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
Also Read ಮನೆಯಲ್ಲಿ ಸಣ್ಣ ಸಣ್ಣ ಕಿರಿಕಿರಿ ಗಂಡ ಹೆಂಡತಿ ಜಗಳ ಮನಸ್ತಾಪ ಉಂಟಾಗಲು ಕಾರಣಗಳು | ಸೂಕ್ತ ನಿವಾರಣೆ ಇಲ್ಲಿದೆ
ಪ್ರತಿಭಟನಾ ಧರಣಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತಿಕ್ರಿಯಿಸಿ, ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.