ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೀದರ್, . 12. ಟ್ರಾಕ್ಟರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಮ್ನಾಬಾದ್ ತಾಲೂಕಿನ ಘಾಟಬೋರಾಳ ಹೊರವಲಯದಲ್ಲಿ ಸೋಮವಾರ ಮುಸ್ಸಂಜೆ ವೇಳೆ ನಡೆದಿದೆ.

ಮೃತಪಟ್ಟವರು ಘಾಟಬೋರಳ ಗ್ರಾಮದ ನಿವಾಸಿ ಶತ್ರುಘ್ನ ಮಾರುತಿ ರಾವು ಹುಣಸನಾಳೆ (27) ಎಂದು ಗುರುತಿಸಲಾಗಿದೆ. ಶತ್ರುಘ್ನ ಸೋಮವಾರ ಸಂಜೆ ಗ್ರಾಮದಿಂದ ಹೊಲಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್

 

error: Content is protected !!
Scroll to Top