ಸುವರ್ಣ ಸಂಭ್ರಮ: ಪ್ರದರ್ಶನ ಸ್ಟಾಲ್ ತೆರೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 12. ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ “ಸುವರ್ಣ ಸಂಭ್ರಮ-50” “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ಜಿಲ್ಲಾಡಳಿತದ ವತಿಯಿಂದ ನವೆಂಬರ್ 20 ಮತ್ತು 21ರಂದು ವಿವಿಧ ಕಾರ್ಯಕ್ರಮಗಳನ್ನು ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವಂತಹ ವಸ್ತುಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲು ಆಸಕ್ತ ಸಂಸ್ಥೆಗಳಿಗೆ 10+10 ಅಳತೆಯ ಮಳಿಗೆಯನ್ನು 2 ದಿನಗಳಿಗೆ ಒಟ್ಟು ರೂ. 2,000 ನೆಲಬಾಡಿಗೆಯಂತೆ ಹಂಚಿಕೆ ಮಾಡಲಾಗುವುದು.

ಕರ್ನಾಟಕದ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವಂತಹ ವಸ್ತು ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲು ಮಳಿಗೆಯನ್ನು ತೆರೆಯಲು ಆಸಕ್ತಿ ಹೊಂದಿರುವ ಸಂಸ್ಥೆಗಳು ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು 575003 ಕಛೇರಿಗೆ ಖುದ್ದಾಗಿ ಸಲ್ಲಿಸಬೇಕು.

Also Read  ತರಬೇತಿ – ಅರ್ಜಿ ಆಹ್ವಾನ

ಮಳಿಗೆಯ ಹಂಚಿಕೆಯನ್ನು ಪರಿಶೀಲನಾ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. ಯಾವುದೇ ಸಂದರ್ಭದಲ್ಲಿ ಮಳಿಗೆಯ ಹಂಚಿಕೆಯನ್ನು ರದ್ದು ಪಡಿಸುವ ಅಧಿಕಾರವನ್ನು ಸಮಿತಿಯು ಹೊಂದಿರುತ್ತದೆ. ಹೆಚ್ಚಿನ ಮಾಹಿತಿಗೆ ಪ್ರದೀಪ್ ಡಿಸೋಜ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು (ಮೊಬೈಲ್ ಸಂಖ್ಯೆ- 9110230562) ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top