ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 12. ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ಬಳಿಕ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ.

ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ನಕ್ಸಲ್‌ ಬೆಂಬಲಿಗರನ್ನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜ್ಯ ಗುಪ್ತಚರ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಓರ್ವ ವ್ಯಕ್ತಿಯನ್ನು ಭೇಟಿಯಾಗಲು ಬಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗಡಿಭಾಗದ ಇಬ್ಬರು ಶಂಕಿತ ವ್ಯಕ್ತಿಗಳ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಬಂದ ಖಚಿತ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು. ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಶೋಧ ನಡೆಸಿ ನಾಡ ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

Also Read  ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ.!

error: Content is protected !!
Scroll to Top