ವಿಟ್ಲ: ಅಪಘಾತ ತಪ್ಪಿಸಲು ಹೋಗಿ 2 ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ವಿಟ್ಲ, . 12. ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಸನನ್ ಇಂದು ಬೆಳಗ್ಗೆ ಕಾರಿನಲ್ಲಿ ವಿಟ್ಲ-ಕಬಕ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟುವಿನ ಅರ್ಕೆಜಾಲು ಎಂಬಲ್ಲಿನ ಒಳ ರಸ್ತೆಯಿಂದ ಯತೀಶ್ ಚಲಾಯಿಸುತ್ತಿದ್ದ ಬೈಕ್ ಏಕಾಏಕಿ ಮುಖ್ಯರಸ್ತೆಗೆ ನುಗ್ಗಿದ್ದು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಬೈಕಿಗೆ ಡಿಕ್ಕಿಯಾಗಿದೆ. ಇದರಿಂದ ಬೈಕ್ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದ್ದು, ಮುಂದುವರಿದ ಕಾರು ರಸ್ತೆಯ ಇನ್ನೊಂದು ಪಾರ್ಶ್ವದಲ್ಲಿ ನಿಲ್ಲಿಸಿದ್ದ ಬೈಕಿಗೂ ಡಿಕ್ಕಿ ಹೊಡೆದಿದೆ. ಬಳಿಕ ಕಾರು ರಸ್ತೆ ಬದಿಯ ಮಣ್ಣಿನ ದಿಬ್ಬದ ಮೇಲೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ್ ಎಂಬವರು ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ರವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Also Read  ಕಾಸರಗೋಡು: ಆಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ.! ➤ ಬಂಟ್ವಾಳ ನಿವಾಸಿಗಳಿಬ್ಬರು ಅರೆಸ್ಟ್

error: Content is protected !!
Scroll to Top