ಗುತ್ತಿಗೆಯಲ್ಲಿ ಮುಸ್ಲಿಂಮರಿಗೆ ಮೀಸಲಾತಿ ವಿಚಾರ ಸ್ಪಷ್ಟನೆ: ಸಿ.ಎಂ ಕಛೇರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, . 12. ಸರ್ಕಾರದ ಸಿವಿಲ್​ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ. ಆದರೆ, ಶೇ4ರಷ್ಟು ಮೀಸಲಾತಿಗಾಗಿ ಅಲ್ಪಸಂಖ್ಯಾತ ಶಾಸಕರು, ಸಚಿವರು ನೀಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿ, ಕಡತ ಮಂಡಿಸಲು ಸೂಚಿಸಿದ್ದಾರೆ. ಹೀಗಾಗಿ ಸರ್ಕಾರ ದ್ವಂದ್ವದಿಂದ ಕೂಡಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಸಿಎಂಗೆ ಮನವಿ ಮಾಡಿದ್ದ ಮುಸ್ಲಿಂ ಶಾಸಕ, ಸಚಿವರುಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಪತ್ರ ಬರೆದಿದ್ದರು.

Also Read  ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ

error: Content is protected !!
Scroll to Top