‘ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ’ ಬಹಿರಂಗ ಹೇಳಿಕೆ ನೀಡಿದ ಶಾಸಕ ಮುನಿರತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, . 12. ನಾನು ಗುತ್ತಿಗೆದಾರನ ಹೆಣ್ಣುಮಗಳ ಬಗ್ಗೆ ಮಾತಾಡಿದ್ದರೆ, ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ ಎಂದು ತಮ್ಮ ವಿರುದ್ಧದ ಅತ್ಯಾಚಾರ ಪ್ರಕರಣದ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಆರ್ ಆರ್ ನಗರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಕಾಲಭೈರವನ ಮೇಲೆ ಅಣೆ ಮಾಡ್ತೇನೆ. ನಾನು ಗುತ್ತಿಗೆದಾರನ ಹೆಣ್ಣುಮಗಳ ಬಗ್ಗೆ ಮಾತಾಡಿದ್ದರೆ, ನಾನು ಏನಾದ್ರು ತಪ್ಪು ಮಾಡಿದ್ರೆ ಹಾಗೆ ಸಾಯಬಾರದು. ರಕ್ತ ಕಾರಿ ಸಾಯಬೇಕು. ಸುಳ್ಳು ದೂರು ಕೊಡಬಾರದು. ಸತ್ಯ ಮಲಗಿರಬಹುದು. ಆದರೆ ಸಾಯಲ್ಲ. ಇವರ ಸ್ವಾರ್ಥಕ್ಕೋಸ್ಕರ ಅಷ್ಟರ ಮಟ್ಟಿಗೆ ಹೋಗಿದ್ದಾರೆ. ನನ್ನ ಬಳಿ ಯಾರೇ ಬಂದ್ರೂ ಏನಮ್ಮ, ತಾಯಿ ಅಂತೇನೆ. ಈ ಎರಡು ಪದ ಬಿಟ್ಟು ಬೇರೆ ಪದ ಉಪಯೋಗಿಸಲ್ಲ ಎಂದಿದ್ದಾರೆ.

Also Read  ಮೈಸೂರು ದಸರಾಕ್ಕೆ ಹಿರಿಯ ಸಾಹಿತಿಹಂಪಾ ನಾಗರಾಜಯ್ಯರವರಿಂದ ಅಧಿಕೃತ ಚಾಲನೆ

error: Content is protected !!
Scroll to Top