ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, . 13. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ವಿಧಾನಸಭೆ ಉಪಚುನಾವಣೆ ಮತದಾನ ನಡೆಯಲಿದ್ದು, ಈ ಪೈಕಿ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಕುತೂಹಲ ಮೂಡಿಸಿದೆ.

ಕುತೂಹಲ ಕೆರಳಿಸಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್‌ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್‌ನಿಂದ ಯಾಸೀರ್‌ ಖಾನ್‌ ಪಠಾಣ್ ಸೇರಿ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಿಂದ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯಿಂದ ಬಂಗಾರು ಹನುಮಂತು ಸೇರಿ 7 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ವರದಿ ತಿಳಿಸಿದೆ.

Also Read  KSRTC ಬಸ್- ಬೈಕ್ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಮೃತ್ಯು

 

error: Content is protected !!
Scroll to Top