ಇಂದು ಕರೋಪಾಡಿ ಗ್ರಾ.ಪಂ. ಉಪಚುನಾವಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು.02. ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿಯವರು

ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾಗಿದ್ದರಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ಇಂದು ನಡೆಯುತ್ತಿದೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಅನ್ವರ್ ಕರೋಪಾಡಿ(ಮೃತ ಜಲೀಲ್ ರವರ ಸಹೋದರ) ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಭಟ್ ಕೋಡ್ಲ ಮಧ್ಯೆ ನೇರ ಹಣಾಹಣಿ ನಡೆಯುತ್ತಿದೆ. ಮತದಾನವು ಮಿತ್ತನಡ್ಕ ಸರ್ಕಾರಿ ಶಾಲೆಯಲ್ಲಿ ನಡೆಯುತ್ತಿದ್ದು, ಮತದಾನ ಕೇಂದ್ರದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ‌.

error: Content is protected !!