(ನ್ಯೂಸ್ ಕಡಬ) newskadaba.com ಇಂಫಾಲ್, ನ. 13. ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಲ್ಲಿನ ಜಿರಿಬಾಮ್ ಜಿಲ್ಲೆಯಲ್ಲಿ ಬೆಳಗ್ಗೆ ಇಬ್ಬರು ವೃದ್ಧರ ಶವ ಪತ್ತೆಯಾಗಿದೆ. ಜೊತೆಗೆ 6 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ನ. 12ರಂದು ನಡೆದ ಗುಂಡಿನ ದಾಳಿಯ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಒಂದು ದಿನದ ಹಿಂದೆ, ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಎನ್‌ಕೌಂಟರ್ ನಲ್ಲಿ 11 ಉಗ್ರರು ಮೃತಪಟ್ಟಿದ್ದರು. ನಾಪತ್ತೆಯಾದವರಿಗಾಗಿ ಆರಂಭಿಸಲಾದ ಶೋಧ ಕಾರ್ಯದಲ್ಲಿ ಜಕುರಧೋರ್ ಕರೋಂಗ್ ಪ್ರದೇಶದಲ್ಲಿ ಅವಶೇಷಗಳಡಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.
Also Read CM ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ- ರಾಜ್ಯಪಾಲರನ್ನು ಭೇಟಿಯಾಗಲಿರುವ ಡಿಸಿಎಂ ನೇತೃತ್ವದ ಸಚಿವರ ನಿಯೋಗ