ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನ. 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ​ಹೊಸ ವೋಲ್ವೋ ಬಸ್ ಸಂಚಾರ ಆರಂಭ – News Kadaba

ನ. 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ​ಹೊಸ ವೋಲ್ವೋ ಬಸ್ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 13.  ರಾಜಧಾನಿ ಬೆಂಗಳೂರಿನಿಂದ ಶಬರಿಮಲೆ ಯಾತ್ರೆ  ಕೈಗೊಳ್ಳುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಸದಾಗಿ ವೋಲ್ವೋ ಬಸ್ ಸೇವೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭಿಸಿದೆ.

ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದ್ದು, ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ. ಅಂದು ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ ತಲುಪುತ್ತದೆ. ನೀಲಕ್ಕಲ್‌ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಮರುದಿನ ಬೆಳಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಇನ್ನು ಪ್ರಯಾಣ ದರ ವಯಸ್ಕರಿಗೆ 1,750 ರೂ. ನಿಗದಿಪಡಿಸಲಾಗಿದೆ.

 

Scroll to Top