ಲಾಕಪ್ ಡೆತ್: ಪಿಎಸ್ಐ, ಹೆಡ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ನ. 13. ಬ್ರಹ್ಮಾವರ ಠಾಣೆಯಲ್ಲಿ ನವೆಂಬರ್ 10ರಂದು ನಡೆದ ಲಾಕಪ್ ಡೆತ್ ಘಟನೆಯ ಹಿನ್ನೆಲೆ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಮಧು ಬಿ.ಇ ಮತ್ತು ಹೆಡ್ ಕಾನ್‌ಸ್ಟೇಬಲ್ ಸುಜಾತಾ ಅವರನ್ನು ಅಮಾನತುಗೊಳಿಸಲಾಗಿದೆ.

ಮೃತ ಬಿಜು ಮೋಹನ್ ಎಂಬಾತನನ್ನು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚೇರ್ಕಾಡಿ ಗ್ರಾಮದಲ್ಲಿ ನಡೆದ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 9 ರಂದು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅವರು ಮೃತಪಟ್ಟಿದ್ದರು. ಘಟನೆ ಸಂಬಂಧ ಬಿಜು ಮೋಹನ್ ಅವರ ಕುಟುಂಬಸ್ಥರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Scroll to Top