(ನ್ಯೂಸ್ ಕಡಬ) newskadaba.com ಮಂಗಳೂರು, ನ. 13. ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ.
ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಲಾಗಿದ್ದು, ಇದರಲ್ಲಿ ಪ್ರಧಾನ ಧರ್ಮಗುರುಗಳಾದ ವಂ| ಆ್ಯಂಡ್ರ‍್ಯೂ ಲಿಯೋ ಡಿ’ಸೋಜಾ, ಸಹಾಯಕ ಧರ್ಮಗುರುಗಳಾದ ವಂ| ವಿಲಿಯಂ ಡಿ’ಸೋಜಾ, ಸಂತ ಲಾರೆನ್ಸ್ ಶಾಲೆಯ ಪ್ರಾಂಶುಪಾಲರಾದ ವಂ| ಪೀಟರ್ ಗೊನ್ಸಾಲ್ವಿಸ್, ಉಪಾಧ್ಯಕ್ಷರಾದ ಜೊನ್ ಡಿ’ಸಿಲ್ವಾ, ಪುಣ್ಯಕ್ಷೇತ್ರ ಸಮಿತಿ ಸಂಯೋಜಕರಾದ ಪ್ರಕಾಶ್ ಪಿಂಟೊ, ಶತಮಾನೋತ್ಸವ ಸ್ಮರಣ ಸಂಚಿಕೆ ಸಂಪಾದಕರಾದ ಮೇರಿ ಮಿರಾಂದಾ, ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದ ಸಂಯೋಜಕರಾದ ಪ್ರೀತಿ ಡಿ’ಸೋಜಾ ಅವರು ಭಾಗವಹಿಸಿದ್ದರು. ಇನ್ನು ಕಾರ್ಯಕ್ರಮಕ್ಕೆ ಸರ್ವರನ್ನು ಆದರದಿಂದ ಸ್ವಾಗತಿಸಲಾಗಿದೆ.