ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಧಾರವಾಡ, . 13.  ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಅಪರಾಧಿಗಳಿಗೆ ಕೊಪ್ಪಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಧಾರವಾಡದ ಹೈಕೋರ್ಟ್ ವಿಭಾಗೀಯ ಪೀಠ ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಕೊಪ್ಪಳದ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ 98 ಮಂದಿ ಅಪರಾಧಿಗಳು ಅ.28 ರಂದು ಧಾರವಾಡ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಇಬ್ಬರು ನ್ಯಾಯಮೂರ್ತಿಗಳಿದ್ದ ವಿಭಾಗೀಯ ಪೀಠವು 98 ಮಂದಿ ಅಪರಾಧಿಗಳಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

Also Read  ಸರ್ಕಾರಿ ಕೆಲಸ ನೀಡುವುದಾಗಿ ಆಮಿಷ- ದೂರು

 

error: Content is protected !!
Scroll to Top