ಕಾಲೇಜಿನಲ್ಲಿ ಕುಸಿದುಬಿದ್ದು ತೀವ್ರ ಅಸ್ವಸ್ಥ- ಉಪನ್ಯಾಸಕಿ ಮೃತ್ಯು

(ನ್ಯೂಸ್ ಕಡಬ) newskadaba.com ನ. 14. ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃತಪಟ್ಟಿರುವ ಕುರಿತು ಬುಧವಾರದಂದು ಮಂಗಳೂರಿನಲ್ಲಿ ನಡೆದಿದೆ.

ಮೃತರನ್ನು ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಎಂದು ಗುರುತಿಸಲಾಗಿದೆ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ವೈದ್ಯರ ತಂಡ ತಿಳಿಸಿತ್ತು.

Also Read  ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು

ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ (ಅನಾಫಿಲ್ಯಾಕ್ಟಿಕ್ ರಿಯಾಕ್ಷನ್) ಸಮಸ್ಯೆ ಇತ್ತು. ಇದರಿಂದಾಗಿ ಈ ಹಿಂದೆಯೂ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಬಳಿಕ ಚೇತರಿಸಿಕೊಂಡಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

error: Content is protected !!
Scroll to Top