ರಾಜ್ಯ ಮಿನಿ ಒಲಿಂಪಿಕ್ಸ್‌:  ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 14. 3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್‌-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ.

ಇಂದು ಸಂಜೆ 5 ಗಂಟೆಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಿಎಂ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಹಲವು ಸಚಿವರು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅಥ್ಲೆಟಿಕ್ಸ್‌, ಬಾಸ್ಕೆಟ್‌ಬಾಲ್‌, ಫುಟ್ಬಾಲ್‌, ಹಾಕಿ, ಕುಸ್ತಿ, ಜಿಮ್ನಾಸ್ಟಿಕ್ಸ್‌, ಶೂಟಿಂಗ್‌ ಸೇರಿದಂತೆ ಒಟ್ಟು 24 ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಕಂಠೀರವ ಹೊರಾಂಗಣ, ಒಳಾಂಗಣ ಸೇರಿದಂತೆ ಬೆಂಗಳೂರಿನ ವಿವಿಧ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ.

Also Read  MBBS ವ್ಯಾಸಂಗ ಮಾಡುವ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ನೀಡುವ ಸ್ಕೀಂ ಗೆ ಕೊಕ್..!

 

error: Content is protected !!
Scroll to Top