ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com ನ. 14. ಪುತ್ತೂರು ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ಪಾಲಿಸುವಂತೆ ಪ್ರವೇಶ ದ್ವಾರದ ಬಳಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ.

ಅದರ ಪ್ರಕಾರ, ದೇವರ ದರ್ಶನಕ್ಕೆ ಬರುವಾಗ ಸ್ವಚ್ಛ, ಶುಭ್ರ ಮತ್ತು ಸಭ್ಯ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಪುರುಷರು ಪ್ಯಾಂಟ್- ಅಂಗಿ ಅಥವಾ ಲುಂಗಿ – ಅಂಗಿ, ಮಹಿಳೆಯರು ಸೀರೆ ಅಥವಾ ಚೂಡಿದಾರ್ ಧರಿಸಿ ದೇವರ ದರ್ಶನ ಪಡೆಯುವಂತೆ ತಿಳಿಸಲಾಗಿದೆ. ದೇವಸ್ಥಾನಕ್ಕೆ ಬರುವಾಗ ಭಕ್ತರು ಧರಿಸಬಹುದಾದ ವಸ್ತ್ರಗಳ ಮಾದರಿಯನ್ನು ಚಿತ್ರದ ಮೂಲಕ ಸೂಚನಾ ಫಲಕದಲ್ಲಿ ಹಾಕಲಾಗಿದೆ. ಅನೇಕ ವರ್ಷಗಳಿಂದ ಭಕ್ತರು ಮತ್ತು ಹಿಂದೂ ಪರ ಸಂಘಟನೆಗಳು ವಸ್ತ್ರ ಸಂಹಿತೆ ಜಾರಿಗೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿಯವರು ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚನಾ ಫಲಕ ಅಳವಡಿಸಿದ್ದಾರೆ.

error: Content is protected !!
Scroll to Top